ಶ್ರೀ ಸತ್ಯಸಾಯಿ ಸೇವಾ ಸಮಿತಿ, ಈಶ್ವರಾಂಬಾ ಟ್ರಸ್ಟ್ (ರಿ.) ಗಾಂಧಿನಗರ, ಮಂಗಳೂರು ಇವರ ಆಶ್ರಯದಲ್ಲಿ ಹಾಗು ಕಲ್ಲಾಡಿ ವಿಠಲ ಶೆಟ್ಟಿ ಸೇವಾ ಟ್ರಸ್ಟ್ (ರಿ.) ಕುಂಡಾವು, ಇರಾ ಗ್ರಾಮ ಪಂಚಾಯತ್, ಯುವಕ ಮಂಡಲ(ರಿ.) ಇರಾ ಇವರ ಸಹಕಾರದೊಂದಿಗೆ ಉಚಿತ ವೈದ್ಯಕೀಯ ಹಾಗು ದಂತ, ಕಣ್ಣಿನ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ದಿನಾಂಕ 23-10-2022 ಆದಿತ್ಯವಾರ ದ.ಕ. ಜಿಲ್ಲಾ ಪಂಚಾಯತ್ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಇರಾ ಇಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಮೊಕ್ತೇಸರರಾದ ಶ್ರೀ ವೈ.ಬಿ ಸುಂದರ್, ಇರಾ ಗ್ರಾಮ ಪಂಚಾಯತ್ ನ ನಿಕಟಪೂರ್ವ ಅಧ್ಯಕ್ಷ ರೂ, ಹಾಲಿ ಸದಸ್ಯರೂ ಆದ ಶ್ರೀ ಅಬ್ದುಲ್ ರಝಾಕ್ ಕುಕ್ಕಾಜೆ ಮಾತನಾಡಿ ಶ್ರೀ ಸತ್ಯಸಾಯಿ ಸೇವಾ ಟ್ರಸ್ಟ್ ನ ಹಾಗು ಯುವಕ ಮಂಡಲದ ಕಾರ್ಯಕ್ರಮಗಳನ್ನು ಶ್ಲಾಘಿಸಿದರು. ಈ ಸಂದರ್ಭದಲ್ಲಿ ಸತ್ಯಸಾಯಿ ಸೇವಾ ಸಂಸ್ಥೆ ಯ ರಾಜ್ಯ ಪದಾಧಿಕಾರಿಗಳಾದ ಶ್ರೀ ಚಂದ್ರಶೇಖರ್ ನಾಯಕ್, ಶ್ರೀ ನಿರಂಜನ್ ಹೆಬ್ಬಾರ್, ಕಲ್ಲಾಡಿ ವಿಠ್ಠಲ ಶೆಟ್ಟಿ ಸೇವಾ ಟ್ರಸ್ಟ್ ನ ಅಧ್ಯಕ್ಷ ರಾದ ಶ್ರೀ ಜಯರಾಮ್ ಪೂಜಾರಿ ಸೂತ್ರಬೈಲು, ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಶ್ರೀ ಮೊಯ್ದಿನ್ ಕುಂಞ, ಇರಾ ಶಾಲೆಯ ಮುಖ್ಯ ಶಿಕ್ಷಕಿಯಾದ ಶ್ರೀಮತಿ ಸೋನಿತ, ಅಧ್ಯಾಪಕರಾದ ಶ್ರೀ ಮಹಮ್ಮದ್, ಯುವಕ ಮಂಡಲ(ರಿ.) ಇರಾ ಇದರ ಅಧ್ಯಕ್ಷರಾದ ಶ್ರೀ ಅಶ್ವಿತ್ ಕೊಟ್ಟಾರಿ ಇರಾ, ಯನೆಪೊಯ ವೈದ್ಯಕೀಯ ಸಂಸ್ಥೆಯ ಡಾ| ಅಫ್ರೀನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸತ್ಯಸಾಯಿ ಸೇವಾ ಟ್ರಸ್ಟ್ ನ ಸದಸ್ಯರಾದ ಶ್ರೀ ದೇವಾನಂದ ರೈ ಕಾರ್ಯಕ್ರಮ ನಿರೂಪಿಸಿದರು.















