“ಜಾತಸ್ಯ ಮರಣಂ ಧ್ರುವಂ” ಎಂಬ ಮಾತಿನಂತೆ ಹುಟ್ಟಿದ ಪ್ರತಿಯೊಬ್ಬ ಜೀವಿಯ ತನ್ನ ಕರ್ತವ್ಯವನ್ನು ನಿರ್ವಹಿಸಿದ ನಂತರ ಜೀವವನ್ನು ತ್ಯಾಗ ಮಾಡಲೇಬೇಕು. ಈ ಹುಟ್ಟು ಸಾವಿನ ನಡುವಿನ ಜೀವನದಲ್ಲಿ ಜನಾನುರಾಗಿಯಾಗಿ,ನಮ್ಮ ಯುವಕ ಮಂಡಲದ ಹಿರಿಯ ಸದಸ್ಯರಾಗಿ, ನಮ್ಮೆಲ್ಲರನ್ನು ತನ್ನ ಹಾಸ್ಯ ಚಟಾಕಿಯಲ್ಲಿ ನಗಿಸುತ್ತ, ನಾವು ಮಾಡುವ ಕಲಾ ಸೇವೆಯಲ್ಲಿ ನಮ್ಮೊಂದಿಗೆ ಹಾಸ್ಯ ಕಲಾವಿದರಾಗಿ ನಟಿಸಿ, ನಮ್ಮೆಲ್ಲ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ನಮಗೆ ಮಾರ್ಗದರ್ಶನ ನೀಡುತ್ತಿದ್ದ ನಮ್ಮ ಆತ್ಮೀಯರಾದ, ಇಂದು ತನ್ನ ದೇಹ ತ್ಯಾಗ ಮಾಡಿ ಸ್ವರ್ಗಸ್ತರಾದ ಶ್ರೀ ದೇಜಪ್ಪ ಪೂಜಾರಿ ತಾಳಿತ್ತಬೆಟ್ಟು ಅವರ ಆತ್ಮಕ್ಕೆ ಶ್ರೀ ಸೋಮನಾಥ ಶಾಂತಿಯನ್ನು ನೀಡಲೆಂದು ಆಶಿಸುವ.
ಯುವಕ ಮಂಡಲ (ರಿ.) ಇರಾ ಇದರ 49ನೇ ವಾರ್ಷಿಕೋತ್ಸವ ದಿನಾಂಕ 25-12-2022 ರ ಭಾನುವಾರ ಯುವಕ ಮಂಡಲದ ರಂಗಮಂದಿರದಲ್ಲಿ ಯಶಸ್ವಿಯಾಗಿ ನಡೆಯಿತು. ಮಧ್ಯಾಹ್ನ 3.30 ಕ್ಕೆ ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನದಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ಯಕ್ಷಗಾನ ಮೇಳದ ದೇವರ ಭವ್ಯ ಮೆರವಣಿಗೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮವು, ಶ್ರೀ ದೇವಿ ಮಹಾತ್ಮೆ ಎಂಬ ಯಕ್ಷಗಾನ ಬಯಲಾಟದೊಂದಿಗೆ ಸಂಪನ್ನವಾಯಿತು. ವಾರ್ಷಿಕೋತ್ಸವದ ಅಂಗವಾಗಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಅನನ್ಯ ಫೀಡ್ಸ್ ಹುಬ್ಬಳ್ಳಿ ಇದರ ಮಾಲಿಕರಾದ ಶ್ರೀ ದಿವಾಣ ಗೋವಿಂದ ಭಟ್ ಮಾತನಾಡಿ ಯಕ್ಷಗಾನಕ್ಕೂ ಇರಾಕ್ಕೂ ಇರುವ ಅವಿನಾಭಾವ ಸಂಬಂಧದ ಕುರಿತು ಬಹಳ ವಿಸ್ತೃತವಾಗಿ ವಿವರಿಸಿದರು.ನಂತರ ಮಾತನಾಡಿದ ಶ್ರೀ ಗಣೇಶ್ ಮೆಡಿಕಲ್ಸ್ ಕಲ್ಲಡ್ಕ ಇದರ ಮಾಲಿಕರಾದ ಶ್ರೀ ಚಂದ್ರಶೇಖರ ರೈ ಕೊಲ್ಯ, ಯಕ್ಷಗಾನಕ್ಕೂ ಹಾಗು ಯುವಕ ಮಂಡಲಕ್ಕೂ ಇರುವ ನಂಟಿನ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ಹಾಗೆಯೇ ತಾಲೂಕು ಪಂಚಾಯತ್ ನ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಚಂದ್ರಹಾಸ ಆರ್ ಕರ್ಕೇರ ಮಾತನಾಡಿ ಯುವಕಮಂಡಲದ ಕಾರ್ಯವೈಖರಿಯನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು. ಇದೇ ಸಂದರ್ಭದಲ್ಲಿ ಯಕ್ಷಗಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಪ್ರಸ್ತುತ ಕಟೀಲು ಮೇಳದ ಪ್ರಬಂಧಕರಾದ ಶ್ರೀ ಶ್ರೀಧರ ಪೂಜಾರಿ ಪಂಜಾಜೆ ಇವರನ್ನು ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ಹಾಗೆಯೇ ಯುವಕ ಮಂಡಲದ ಸ್ಥಾಪಕ ಸದಸ್ಯರಾದ ಶ್ರೀ ಗೋಪಾಲ ಮಾಸ್ಟರ್ ಕುಂಡಾವು, ಶ್ರೀ ಜನಾರ್ಧನ ಪಕ್ಕಳ ತಾಳಿತ್ತಬೆಟ್ಟು ಇವರನ್ನು ಗೌರವಿಸಲಾಯಿತು. ಅತೀ ಹೆಚ್ಚು ಅಂಕ ಗಳಿಸಿದ ಊರಿನ ವಿದ್ಯಾರ್ಥಿಗಳಿಗೆ ಪ್ರೊತ್ಸಾಹಧನ ನೀಡಲಾಯಿತು. ಯಕ್ಷಗಾನಕ್ಕೆ ಬೆನ್ನೆಲುಬಾಗಿ ನಿಂತು ಸಂಘದ ಎಲ್ಲಾ ಕಾರ್ಯಚಟುವಟಿಕೆಗಳಲ್ಲಿ ಬಹಳ ಉತ್ಸಾಹದಿಂದ ಪಾಲ್ಗೊಳ್ಳುವ ಸಂಘದ ಸದಸ್ಯರಾದ ಶ್ರೀ ಸ್ಟೀವನ್ ಡಿಸಿಲ್ವ ದೈವದಹಿತ್ಲು, ಶ್ರೀ ಅದ್ರಾಮ ಡಿ ಇವರನ್ನು ಗೌರವಿಸಲಾಯಿತು. ಸಂಧರ್ಭದಲ್ಲಿ ಉದ್ಯಮಿ, ಶ್ರೀ ಜಗದೀಶ ಆಳ್ವ ನಾರ್ಯಗುತ್ತು, ಯುವಕ ಮಂಡಲದ ಅಧ್ಯಕ್ಷರಾದ ಶ್ರೀ ಅಶ್ವಿತ್ ಕೊಟ್ಟಾರಿ ಇರಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಭರತ್ ರಾಜ್ ರೈ ಸಂಘದ ವಾರ್ಷಿಕ ವರದಿ ವಾಚಿಸಿದರು, ಶ್ರೀ ಪುಷ್ಪರಾಜ್ ಕುಕ್ಕಾಜೆ ಸನ್ಮಾನಿತರನ್ನು ಪರಿಚಯಿಸಿದರು. ಶ್ರೀ ನಿತೇಶ್ ಶೆಟ್ಟಿ ಸಂಪಿಲ ವಂದಿಸಿದರು. ಯತಿರಾಜ್ ಶೆಟ್ಟಿ ಸಂಪಿಲ ಕಾರ್ಯಕ್ರಮ ನಿರೂಪಿಸಿದರು.
ಇದೇ ಬರುವ ತಾರೀಖು 25-12-2022 ರ ಭಾನುವಾರ ಯುವಕ ಮಂಡಲ ( ರಿ.) ಇರಾ ಇದರ 49ನೇ ವಾರ್ಷಿಕೋತ್ಸವದ ಪ್ರಯುಕ್ತ ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಮೇಳದವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ಇರಾ ಯುವಕ ಮಂಡಲದ ವಠಾರದಲ್ಲಿ ನಡೆಯಲಿದ್ದು, ಸಂಜೆ 3.30 ಗಂಟೆಗೆ ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನದಿಂದ ಯುವಕ ಮಂಡಲದವರೆಗೆ ಮೇಳದ ದೇವರ ಭವ್ಯವಾದ ಮೆರವಣಿಗೆಯು ಸಾಗಲಿದ್ದು, ನಂತರ ಯುವಕ ಮಂಡಲದ ರಂಗ ಮಂದಿರದಲ್ಲಿ ಸಭಾ ಕಾರ್ಯಕ್ರಮ ನಂತರ 5.30 ಕ್ಕೆ ಸರಿಯಾಗಿ ಚೌಕಿ ಪೂಜೆ , ಪ್ರಸಾದ ವಿತರಣೆ, 8.30ಕ್ಕೆ ಅನ್ನ ಸಂತರ್ಪಣೆ ನಡೆಯಲಿದ್ದು ಈ ಎಲ್ಲಾ ಕಾರ್ಯಕ್ರಮದಲ್ಲಿ ತಾವು ಭಾಗವಹಿಸಿ ತನು-ಮನ-ಧನ ಗಳಿಂದ ಸಹಕರಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿಸುವ.
ಶ್ರೀ ಸತ್ಯಸಾಯಿ ಸೇವಾ ಸಮಿತಿ, ಈಶ್ವರಾಂಬಾ ಟ್ರಸ್ಟ್ (ರಿ.) ಗಾಂಧಿನಗರ, ಮಂಗಳೂರು ಇವರ ಆಶ್ರಯದಲ್ಲಿ ಹಾಗು ಕಲ್ಲಾಡಿ ವಿಠಲ ಶೆಟ್ಟಿ ಸೇವಾ ಟ್ರಸ್ಟ್ (ರಿ.) ಕುಂಡಾವು, ಇರಾ ಗ್ರಾಮ ಪಂಚಾಯತ್, ಯುವಕ ಮಂಡಲ(ರಿ.) ಇರಾ ಇವರ ಸಹಕಾರದೊಂದಿಗೆ ಉಚಿತ ವೈದ್ಯಕೀಯ ಹಾಗು ದಂತ, ಕಣ್ಣಿನ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ದಿನಾಂಕ 23-10-2022 ಆದಿತ್ಯವಾರ ದ.ಕ. ಜಿಲ್ಲಾ ಪಂಚಾಯತ್ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಇರಾ ಇಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಮೊಕ್ತೇಸರರಾದ ಶ್ರೀ ವೈ.ಬಿ ಸುಂದರ್, ಇರಾ ಗ್ರಾಮ ಪಂಚಾಯತ್ ನ ನಿಕಟಪೂರ್ವ ಅಧ್ಯಕ್ಷ ರೂ, ಹಾಲಿ ಸದಸ್ಯರೂ ಆದ ಶ್ರೀ ಅಬ್ದುಲ್ ರಝಾಕ್ ಕುಕ್ಕಾಜೆ ಮಾತನಾಡಿ ಶ್ರೀ ಸತ್ಯಸಾಯಿ ಸೇವಾ ಟ್ರಸ್ಟ್ ನ ಹಾಗು ಯುವಕ ಮಂಡಲದ ಕಾರ್ಯಕ್ರಮಗಳನ್ನು ಶ್ಲಾಘಿಸಿದರು. ಈ ಸಂದರ್ಭದಲ್ಲಿ ಸತ್ಯಸಾಯಿ ಸೇವಾ ಸಂಸ್ಥೆ ಯ ರಾಜ್ಯ ಪದಾಧಿಕಾರಿಗಳಾದ ಶ್ರೀ ಚಂದ್ರಶೇಖರ್ ನಾಯಕ್, ಶ್ರೀ ನಿರಂಜನ್ ಹೆಬ್ಬಾರ್, ಕಲ್ಲಾಡಿ ವಿಠ್ಠಲ ಶೆಟ್ಟಿ ಸೇವಾ ಟ್ರಸ್ಟ್ ನ ಅಧ್ಯಕ್ಷ ರಾದ ಶ್ರೀ ಜಯರಾಮ್ ಪೂಜಾರಿ ಸೂತ್ರಬೈಲು, ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಶ್ರೀ ಮೊಯ್ದಿನ್ ಕುಂಞ, ಇರಾ ಶಾಲೆಯ ಮುಖ್ಯ ಶಿಕ್ಷಕಿಯಾದ ಶ್ರೀಮತಿ ಸೋನಿತ, ಅಧ್ಯಾಪಕರಾದ ಶ್ರೀ ಮಹಮ್ಮದ್, ಯುವಕ ಮಂಡಲ(ರಿ.) ಇರಾ ಇದರ ಅಧ್ಯಕ್ಷರಾದ ಶ್ರೀ ಅಶ್ವಿತ್ ಕೊಟ್ಟಾರಿ ಇರಾ, ಯನೆಪೊಯ ವೈದ್ಯಕೀಯ ಸಂಸ್ಥೆಯ ಡಾ| ಅಫ್ರೀನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸತ್ಯಸಾಯಿ ಸೇವಾ ಟ್ರಸ್ಟ್ ನ ಸದಸ್ಯರಾದ ಶ್ರೀ ದೇವಾನಂದ ರೈ ಕಾರ್ಯಕ್ರಮ ನಿರೂಪಿಸಿದರು.
ಇರಾ ಶ್ರೀ ಸೋಮನಾಥೇಶ್ವರ ಭಜನಾ ಮಂಡಳಿಯ ವಾರ್ಷಿಕ ಮಹಾ ಸಭೆ ದಿನಾಂಕ 28-08-2022 ರಂದು ಇರಾ ಶಾಲೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಭಜನಾ ಮಂಡಳಿಯ ವಾರ್ಷಿಕ ಆಯವ್ಯಯಗಳನ್ನು ಮಂಡಿಸಲಾಯಿತು. ನಂತರ 2022-23 ಅವಧಿಗೆ ನೂತನ ಸದಸ್ಯರನ್ನು ಒಮ್ಮತದಿಂದ ಆಯ್ಕೆ ಮಾಡಲಾಯಿತು.ಗೌರವಾಧ್ಯಕ್ಷರಾಗಿ ಮಂಜುನಾಥ ಡಿ ಶೆಟ್ಟಿ, ಅಧ್ಯಕ್ಷರಾಗಿ ಸೂರ್ಯಪ್ರಕಾಶ್ ರೈ, ಉಪಾಧ್ಯಕ್ಷರಾಗಿ ಭರತರಾಜ್ ರೈ, ಕಾರ್ಯದರ್ಶಿಗಳಾಗಿ ಚರಣ್ ಪಕ್ಕಳ ಮತ್ತು ದೇವಿಪ್ರಸಾದ್ ಶೆಟ್ಟಿ, ಜತೆ ಕಾರ್ಯದರ್ಶಿಗಳಾಗಿ ನಿತೇಶ್ ಶೆಟ್ಟಿ ಮತ್ತು ವಿನೋದ್ ಕೆಂಜಿಲಾ, ಸಂಘಟನಾ ಕಾರ್ಯದರ್ಶಿಯಾಗಿ ರಾಜಶೇಖರ್ ರೈ, ಖಜಾಂಚಿಯಾಗಿ ಜಗದೀಶ್ ನಾಯರ್ ಕೋಡಿ ಮತ್ತಯ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ವಜ್ರಾಕ್ಷ ಟಿ. ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಸದಸ್ಯರು ಹಾಗು ಊರಿನ ಗಣ್ಯರು ಉಪಸ್ಥಿತರಿದ್ದರು.
ಯುವಕ ಮಂಡಲ(ರಿ.) ಇರಾ ಇದರ ವತಿಯಿಂದ ತುಳುನಾಡಿನ ಸಾಂಪ್ರದಾಯಿಕ ಕ್ರೀಡಾ ಕಾರ್ಯಕ್ರಮ ಕೆಸರ್ಡೊಂಜಿ ದಿನ ಇದೇ ಭಾನುವಾರ ದಿನಾಂಕ 04-09-2022ರಂದು ಇರಾ ಬಾವಬೀಡಿನ ಗದ್ದೆಯಲ್ಲಿ ನಡೆಯಿತು. ಬಾವಬೀಡು ದಿ| ಗೋಪಿ ಎಸ್ ಭಂಡಾರಿ ವೇದಿಕೆಯಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಬಾವಬೀಡು ಶ್ರೀ ವೇಣುಗೋಪಾಲ್ ಭಂಡಾರಿ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮುಖ್ಯ ಅತಿಥಿಗಳಾಗಿದ್ದ, ಪಿಲಿಕುಳ ವನ್ಯದಾಮದ ನಿರ್ದೇಶಕರಾದ ಶ್ರೀ ಜಯಪ್ರಕಾಶ್ ಭಂಡಾರಿ ಬಾವಬೀಡು ಮಾತನಾಡಿ ಯುವಕ ಮಂಡಲದ ಈ ಕಾರ್ಯ ವನ್ನು ಶ್ಲಾಘಿಸಿ ಶುಭ ಹಾರೈಸಿದರು. ಹಾಗೆಯೇ ಮತ್ತೋರ್ವ ಅತಿಥಿ ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿ ಡಾ| ಸತೀಶ್ ಭಂಡಾರಿ ಬಾವಬೀಡು ಮಾತನಾಡಿ ಮುಂದಿನ ಯುವ ಪೀಳಿಗೆಗೆ ಇಂತಹ ಕಾರ್ಯಕ್ರಮದ ಅವಶ್ಯಕತೆಯನ್ನು ವಿವರಿಸಿದರು. ಹಾಗೆಯೇ ಶಾಸಕರಾದ ಯು.ಟಿ. ಖಾದರ್, ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಪ್ರಶಾಂತ್ ಕಾಜವ, ಬಂಟ್ವಾಳ ತಾಲೂಕು ಪಂಚಾಯತ್ ನ ನಿಕಟ ಪೂರ್ವ ಅಧ್ಯಕ್ಷ ರಾದ ಚಂದ್ರಹಾಸ ಕರ್ಕೇರ, ಇರಾ ಗ್ರಾಮ ಪಂಚಾಯತ್ ನ ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ ಅಬ್ದುಲ್ ರಜಾಕ್ ಕುಕ್ಕಾಜೆ, ಮಹಾದೇವ ವಿವಿಧೋದ್ದೇಶ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಶ್ರೀ ಪುಷ್ಪರಾಜ ಕುಕ್ಕಾಜೆ, ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕರಾದ ಶ್ರೀ ಸುಭೋದ್ ಭಂಡಾರಿ ಬಾವಬೀಡು, ಶ್ರೀ ಐ ನೇಮು ಪೂಜಾರಿ ಆಚೆಬೈಲು ಶುಭ ಹಾರೈಸಿದರು. ಸಾಯಂಕಾಲ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀ ದೇವಿಪ್ರಸಾದ್ ಶೆಟ್ಟಿ ಕಲ್ಲಾಡಿ, ಶ್ರೀ ಜಗದೀಶ್ ಶೆಟ್ಟಿ ಇರಾಗುತ್ತು, ಶ್ರೀ ವೈ.ಬಿ ಸುಂದರ್, ಚಿಣ್ಣರಲೋಕ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ರಾದ ಶ್ರೀ ಚಂದ್ರಹಾಸ ರೈ ಬಾಲಾಜಿಬೈಲು, ಬಿ.ಜೆ.ಪಿ ಮುಖಂಡರಾದ ಶ್ರೀ ಸತೀಶ್ ಕುಂಪಲ, ಶ್ರೀ ಹೇಮಂತ್ ಶೆಟ್ಟಿ, ಶ್ರೀ ಸಂತೋಷ್ ಕುಮಾರ್ ರೈ ಬೋಳ್ಯಾರ್, ಕಲ್ಲಾಡಿ ವಿಠಲ ಶೆಟ್ಟಿ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಜಯರಾಮ್ ಪೂಜಾರಿ ಸೂತ್ರಬೈಲು, ಕಾರ್ಯದರ್ಶಿಗಳಾದ ಶ್ರೀ ಗಣೇಶ್ ಕೊಟ್ಟಾರಿ ಸಂಪಿಲ, ಯುವಕ ಮಂಡಲದ ಅಧ್ಯಕ್ಷರಾದ ಶ್ರೀ ಅಶ್ವಿತ್ ಕೊಟ್ಟಾರಿ ವಿಜೇತರಿಗೆ ಬಹುಮಾನ ವಿತರಿಸಿದರು. ಊರಿನ ಗಣ್ಯರು ಹಾಗು ಯುವಕ ಮಂಡಲದ ಸರ್ವ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಯುವಕ ಮಂಡಲದ ಹಿರಿಯ ಸದಸ್ಯರಾದ ಶ್ರೀ ಯತಿರಾಜ್ ಶೆಟ್ಟಿ ಸಂಪಿಲ, ಶ್ರೀ ನಿತೇಶ್ ಶೆಟ್ಟಿ ಸಂಪಿಲ ಹಾಗು ಶ್ರೀ ಶಿಶನ್ ಕೌಡೂರು ಕಾರ್ಯ ಕ್ರಮ ನಿರೂಪಿಸಿದರು
ಯುವಕ ಮಂಡಲ (ರಿ.) ಇರಾ ಇದರ ವತಿಯಿಂದ ಇದೇ ಬರುವ ತಾರೀಖು 04-09-2022 ರ ಭಾನುವಾರ ಬೆಳಿಗ್ಗೆ 8ರಿಂದ ಸಂಜೆ 6ರ ವರೆಗೆ ಇರಾ ಬಾವಬೀಡಿನ ಗದ್ದೆಯಲ್ಲಿ ತುಳುನಾಡಿನ ಕ್ರೀಡಾ ಕೂಟ ಕೆಸರ್ಡೊಂಜಿ ದಿನ ಕಾರ್ಯಕ್ರಮ ನಡೆಯಲಿದ್ದು ತಮ್ಮೆಲ್ಲಾರಿಗೂ ಪ್ರೀತಿ ಪೂರ್ವಕ ಸ್ವಾಗತ ಬಯಸುವ
ಯುವಕ ಮಂಡಲ(ರಿ.) ಇರಾ ಇದರ ವತಿಯಿಂದ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು. ಯುವಕ ಮಂಡಲದ ಅಧ್ಯಕ್ಷರಾದ ಅಶ್ವಿತ್ ಕೊಟ್ಟಾರಿಯವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಊರಿನ ಗಣ್ಯರಾದ ಶ್ರೀ ಗೋಪಾಲ ಮಾಸ್ತರ್ ಅವರು ಸ್ವಾತಂತ್ರ್ಯ ದಿನದ ಮಹತ್ವವನ್ನು ವಿವರಿಸಿ ಎಲ್ಲಾರಿಗು ಶುಭಾಶಯ ತಿಳಿಸಿದರು.ಈ ಸಂದರ್ಭದಲ್ಲಿ ಇರಾ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗು ಸರ್ವ ಸದಸ್ಯರು, ಶಾಲಾ ಶಿಕ್ಷಕ ವೃಂದ, ಶಾಲಾಭಿವೃದ್ದಿ ಸಮಿತಿಯ ಸದಸ್ಯರು, ಊರಿನ ಗಣ್ಯರು ಹಾಗು ಯುವಕ ಮಂಡಲದ ಸರ್ವಸದಸ್ಯರು ಉಪಸ್ಥಿತರಿದ್ದರು
ಇಂದು ಇರಾ ಯುವಕ ಮಂಡಲಕ್ಕೆ ಜನಪ್ರಿಯ ಶಾಸಕ ಯು ಟಿ ಖಾದರ್ ರವರ ನೇತೃತ್ವದಲ್ಲಿ, ಗ್ರಾಮ ಪಂಚಾಯತ್ ಇರಾ ಇದರ ನಿಕಟ ಪೂರ್ವ ಅಧ್ಯಕ್ಷ ಅಬ್ದುಲ್ ರಝಕ್ ಕುಕ್ಕಾಜೆ ಇವರ ಸಹಕಾರದಲ್ಲಿ ಆಟೋಟ ಸಾಮಗ್ರಿಗಳು ದೊರೆತಿದೆ. ಅವರಿಗೆ ಸಂಘದ ಪರವಾಗಿ ಧನ್ಯವಾದಗಳು ಅದನ್ನು ಸಂಘದ ಸದಸ್ಯರಾದ ರಮೇಶ್ ಪೂಜಾರಿ ಸಂಪಿಲ, ಪ್ರಸೀನ್ ಶೆಟ್ಟಿ ಆಚೆಬೈಲ್ ಸ್ವೀಕರಿಸಿದರು
ಯುವಕ ಮಂಡಲ(ರಿ.) ಇರಾ ಇದರ ವತಿಯಿಂದ ಸಾರ್ವಜನಿಕ ಗಣೇಶೋತ್ಸವ ಇದೇ ಬರುವ ತಾರೀಖು 31-0-2022ರ ಬುಧವಾರ ಇರಾ ಶಾಲಾ ಮೈದಾನದಲ್ಲಿ ವಿಜೃಂಬಣೆಯಿಂದ ಜರಗಲಿರುವುದು. ಕಲಾಭಿಮಾನಿಗಳಿಗೆ ಆದರದ ಸ್ವಾಗತ